ಮೂಲಸೌಕರ್ಯ ಅಭಿವೃದ್ಧಿ,
Ports & Inland Water Transport Department

ಕರ್ನಾಟಕ ಜಲಸಾರಿಗೆ ಮಂಡಳಿ

ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿ ಉದ್ದೇಶಿತ ಯೋಜನಾ ನಿವೇಶನಗಳಿಗೆ ಕೆಎಂಬಿ ಸಿಇಒ ಭೇಟಿ

ವಿಜಯಪುರ, ಅಕ್ಟೋಬರ್.30: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾಗರಮಾಲ ಯೋಜನೆಯಡಿ ಪ್ರವಾಸೋದ್ಯಮ ಪೂರಕವಾಗಿ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುವ ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಯರಾಮ್ ರಾಯ್‍ಪುರ ಅವರು ತಿಳಿಸಿದರು.

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯ ಸಾಧ್ಯತೆ, ಯೋಜನೆಯ ಭೂಸ್ವಾಧೀನ ಮತ್ತು ಜಲಸಾರಿಗೆ ಉಪಯುಕ್ತತೆ ಬಗ್ಗೆ ಪರಿಶೀಲನೆ ಹಾಗೂ ಆಲಮಟ್ಟಿ ಆಣೆಕಟ್ಟಿನ ಕೆಳಭಾಗದಲ್ಲಿರುವ 25 ಎಕರೆ ಜಮೀನಿನಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೀನು ಸಾಕಾಣಿಕೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿರುವ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿದಲ್ಲಿ ಸ್ಥಳೀಯ ಜನರಿಗೆ ವಿವಿಧ ಆರ್ಥಿಕವಾಗಿ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ನದಿ ತೀರದಲ್ಲಿ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸಿದ್ದಲ್ಲಿ ಹೆಚ್ಚಿನ ಸಂಖ್ಯೆ ಪ್ರವಾಸಿಗರ ಗಮನ ಹೆಚ್ಚು ಸೆಳೆಯಬಹುದು. ಜೊತೆಗೆ ಈ ಯೋಜನೆಯಿಂದ ಸ್ಥಳೀಯ ಜನರು ವಿವಿಧ ಆರ್ಥಿಕ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದರು.

ಈ ಯೋಜನೆಯನ್ನು ಅಭಿವೃದ್ಧಿಪಡಿಸಿದಲ್ಲಿ ಪ್ರವಾಸಿಗರು ಮತ್ತು ಸುತ್ತಮುತ್ತ ಪ್ರದೇಶದ ನಿವಾಸಿಗಳಿಗೆ ನೀರು ಆಧಾರಿತ ಕ್ರೀಡೆಗಳನ್ನು ಅನುಭವಿಸುವ ಅವಕಾಶಗಳನ್ನು ಒದಗಿಸಿ ಪ್ರವಾಸೋದ್ಯಮ ಚಟುವಟಿಕೆಗಳು ಅಭಿವೃದ್ಧಿಯಾಗಲಿದೆ ಜಯರಾಮ್ ರಾಯ್‍ಪುರ ಅವರು ತಿಳಿಸಿದರು.

ಈ ಪ್ರದೇಶದಲ್ಲಿ ದೋಣಿ,ನೌಕೆ ನಿರ್ಮಾಣ, ಬೋಟ್ ಯಾರ್ಡ್‍ಗಳು ಹಾಗೂ ಸಂಬಂಧಿತ ಉಪಕರಣಗಳ ತಯಾರಿಕೆ ಮುಂತಾದ ಇತರ ಬೆಂಬಲದೊಂದಿಗೆ ಉದ್ಯಮ ತೆರೆಯುವ ಸಾಮಥ್ರ್ಯವನ್ನು ಅಭಿವೃದ್ಧಿ ಪಡಿಸುವಿಕೆಯಲ್ಲಿ ನೆರವಾಗಲಿದೆ ಎಂದು ತಿಳಿಸಿದರು.

ಸುತ್ತ ಮುತ್ತಲಿನ ಜಿಲ್ಲೆಯಲ್ಲಿರುವ ಪ್ರವಾಸ ತಾಣಗಳು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿದ್ದು, ಜಲಮಾರ್ಗದ ಅಭಿವೃದ್ಧಿಗೆ ಮೂಲಸೌಕರ್ಯ ಒದಗಿಸಿದ್ದಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆ ಪ್ರವಾಸಿಗರನ್ನು ಆಕರ್ಷಿಸಿ ಸರ್ಕಾರಕ್ಕೆ ಆದಾಯವನ್ನು ಗಳಿಸಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ ಅಧೀಕ್ಷಕ ಇಂಜಿನೀಯರ್ ಹಿರೇಗೌಡರ, ಕಾರ್ಯಪಾಲಕ ಇಂಜಿನಿಯರ್ ದೊಡ್ಡಮನಿ, ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಚಲವಾದಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನೀಯರ್ ಪಾಂಡುರಂಗ, ಕುಲಕರ್ಣಿ ಸೇರಿದಂತೆ ಮತ್ತಿತ್ತರು ಇದ್ದರು.

admin
Author: admin

Previous ಆಲಮಟಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಹೆರಕಲ್: ಬಿಇಒ ಜಯರಾಮ

Leave Your Comment

CONTENT OWNED AND MAINTAINED BY : Infrastructure Development Ports & Inland Water Transport Department

Last Updated : 05-10-2023 01:13 PM

Designed, Developed and Hosted by: Center for e-Governance - Web Portal, Government of Karnataka © 2024, All Rights Reserved.